Breaking News

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ?

Spread the love

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿದೆ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ.

ಇದರಂತೆ ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ ಸಮಸ್ಯೆಗಳನ್ನು ಸಾಧ್ಯವಾದಷ್ಟು ಪರಿಹರಿಸಲು ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:
ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿ

ಜೂನ್.16-17 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳೂ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

ಜೂನ್. 10 ರಂದು ರಾಜ್ಯಸಭೆ ಚುನಾವಣೆ ಹಾಗೂ ಜೂನ್.13 ರಂದು ರಾಜ್ಯ ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಈ ಚುನಾವಣೆಗಳ ಬಳಿಕ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಲಿವೆ. ಹೀಗಾಗಿ ಸರಣಿ ಚುನಾವಣೆಗಳು ಇರುವ ಹಿನ್ನೆಲೆಯಲ್ಲಿ ರಾಜ್ಯಸಬೆ ಹಾಗೂ ವಿಧಾನಪರಿಷತ್ ಚುನಾವಣೆ ಪೂರ್ಣಗೊಂಡ ಬಳಿಕ ಮಧ್ಯದಲ್ಲಿರುವ ಜೂನ್15-17ರಂದೇ ಸಂಪುಟ ವಿಸ್ತರಣೆ ಮಾಡಲು ನಾಯಕರು ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಕೂಡ ಸಡಿಲಗೊಂಡಿರಲಿದ್ದು, ಈ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ