Breaking News

ರೈತರಿಗೆ ಬಿತ್ತನೆ ಬೀಜ ಗೊಬ್ಬರ ಪೂರೈಸುವಂತೆ ಡಿಸಿಗೆ ಮನವಿ

Spread the love

ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಮಾಡುವ ಈ ಸಂದರ್ಭದಲ್ಲಿ ರೈತರಿಗೆ ರಾಸಾಯನಿಕ ಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗುತ್ತಿದ್ದು ಸರಕಾರ ಈ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳುತ್ತಿ ಎಂದು ಆಕ್ರೋಶಗೊಂಡ ನೇಗಿಲಯೋಗಿ ರೈತ ಸಂಘಟನೆಯ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದೆ ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಆದರೆ ಇಲ್ಲಿಯವರೆಗೂ ರೈತರಿಗೆ ಬಿತ್ತನೆ ಮಾಡಲು ಸಮರ್ಪಕ ಬೀಜ ಹಾಗೂ ಗೊಬ್ಬರಗಳನ್ನು ಪೂರೈಕೆ ಮಾಡುತ್ತಿಲ್ಲ.

ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ವಿಚಾರವನ್ನು ಈಗಾಗಲೇ ಹಲವಾರು ಬಾರಿ ಸರಕಾರದ ಗಮನಕ್ಕೆ ತಂದರೂ ಕೂಡ ಕಾರ್ಯವಾಗಿಲ್ಲ ಎಂದು ನೇಗಿಲಯೋಗಿ ರೈತ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಖಳ ಕಚೇರಿಗೆ ಆಗಮಿಸಿ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಈ ಕುರಿತಂತೆ ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.


Spread the love

About Laxminews 24x7

Check Also

ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ

Spread the loveಹುಬ್ಬಳ್ಳಿ/ಚಿಕ್ಕಮಗಳೂರು: ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ