Breaking News

ಶಿಕ್ಷಣ ಸಚಿವರ ವಜಾಗೊಳಿಸಿ

Spread the love

ಶಿಕ್ಷ ಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ, ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಜನ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ಶನಿವಾರ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತಗಳನ್ನು ಕೇಸರೀಕರಣಗೊಳಿಸಿ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷದ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.

‘ರಾಷ್ಟ್ರಕವಿ’, ‘ಯುಗದ ಕವಿ’ ಎಂದು ಹೆಸರಾಗಿರುವ ಕುವೆಂಪು ಅವರಂತಹ ಮಹಾನ್ ವ್ಯಕ್ತಿಗಳ ಕೊಡುಗೆಯಾದ ನಾಡಗೀತೆಗೆ ಅವಮಾನ ಮಾಡುವಂತಹ ರಾಷ್ಟ್ರದ್ರೋಹಿ, ಸಂಘ ಪರಿವಾರದ ಹಿನ್ನೆಲೆಯ ವ್ಯಕ್ತಿ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಇಂತಹ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಪಠ್ಯಪುಸ್ತಕ ರಚನೆ ಮಾಡಿ ವಿದ್ಯಾರ್ಥಿಗಳ ದಿಕ್ಕುತಪ್ಪಿಸುತ್ತಿರುವ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು.

ರೋಹಿತ್
ಚಕ್ರತೀರ್ಥನನ್ನು ಅಮಾನತುಗೊಳಿಸಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ