ರಾಜ್ಯದಲ್ಲಿ ಪಠ್ಯ ಮರು ಪರಿಷ್ಕರಣೆ ಮಾಡಿ ಹೊಸದಾಗಿ ಪಠ್ಯವನ್ನು ಮುದ್ರಣ ಮಾಡಬೇಕು. ಅದೇ ರೀತಿ ಪಠ್ಯದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಶಾಲಾ ಶಿಕ್ಷಣ ಸಂಪೂರ್ಣ ಅವೈಜ್ಞಾನಿಕ, ಅಸಂವಿಧಾನಾತ್ಮಕ ಹಾಗೂ ಅನೈತಿಕಗೊಳಿಸಲು ಹೊರಟಿರುವ ಪಠ್ಯಪುಸ್ತಕ ಮರು ಪರಿಶೀಲನೆಗಾಗಿ ಪಠ್ಯವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Laxmi News 24×7