ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್ ಸಚಿವ ಸತ್ಯೇಂದ್ರ ಜೈನ್ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ.
ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.
ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಕೋಲ್ಕತ್ತಾ ಮೂಲದ ಕಂಪನಿ ಜತೆಯೂ 4.81 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಚಿವ ಸತ್ಯೇಂದ್ರ ಜೈನ್ನನ್ನು ಬಂಧಿಸಲಾಗಿದೆ.