Breaking News

ಸಿಡಿಲು ಬಡಿದು ಮಹಿಳೆ ಸಾವು : ಏಳು ಜನರಿಗೆ ಗಂಭೀರ ಗಾಯ

Spread the love

ರಟ್ಟೀಹಳ್ಳಿ : ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದು ಮಹಿಳೆ ಸಾವಿಗೀಡಾಗಿದ್ದು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ಕೋಟೆ ನಿವಾಸಿ ಕರಿಯಮ್ಮ ರಂಗಪ್ಪ ಪರಸಪ್ಪನವರ (35) ಮೃತರು.

ಲತಾ ಮಾರುತೆಪ್ಪ ಸುಣಗಾರ, ಮಾರುತೆಪ್ಪ ಸುಣಗಾರ, ಸುಧಾ ಪರಸಪ್ಪನವರ, ರತ್ನಾ ಉಪ್ಪಾರ, ಸಾಕಮ್ಮ ಸುಣಗಾರ, ರವೀಂದ್ರ ಪರಸಪ್ಪನವರ, ಜುಬೇದಾ ಬಾಗಲಮನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗಣ್ಯರ ಭೇಟಿ : ವಿಷಯ ತಿಳಿಯುತ್ತಲೇ ಸ್ಥಳಕ್ಕೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಯಾನಂದ ಜಾವಣ್ಣನವರ, ದೇವರಾಜ ನಾಗಣ್ಣನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಸ್ಥಳದಲ್ಲಿ ರಟ್ಟೀಹಳ್ಳಿ ತಹಶೀಲ್ದಾರ್‌ ಅರುಣಕುಮಾರ ಕಾರಗಿ, ಪಿಎಸ್‌ಐ ಕೃಷ್ಣಪ್ಪ ತೋಪಿನ,ಕಂದಾಯ ಅಧಿಕಾರಿಗಳು ಹಾಜರಿದ್ದರು.

ಜೆಡಿಎಸ್ನ ಜಯಾನಂದ ಜಾವಣ್ಣನವರ ಮೃತ ಕುಟುಂಬಕ್ಕೆ ಸ್ಥಳದಲ್ಲಿಯೇ ಪರಿಹಾರ ಹಣವಾಗಿ ₹5 ಸಾವಿರ ನೀಡಿದರು. ‘ಸಿಡಿಲಿನಿಂದ ಮೃತಪಟ್ಟ ಕುಟುಂಬಸ್ಥರಿಗೆ ಸರ್ಕಾರ ₹25 ಲಕ್ಷ ಪರಿಹಾರದ ಹಣ ನೀಡಬೇಕು. ಅಲ್ಲದೇ ಗಾಯಾಳುಗಳಿಗೆ ₹5 ಲಕ್ಷ ಪರಿಹಾರ ನೀಡಬೇಕು’ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ