Breaking News

ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ: ಬಿಎಸ್ ವೈ ಪರ ಲಕ್ಷ್ಮೀ ಹೆಬ್ಬಾಳ್ಕರ್ ಬ್ಯಾಟಿಂಗ್

Spread the love

ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ.

 

ಹೌದು, ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಹೇಬ್ರು ನೋಡಬೇಕು’ ಎಂದು ಅವರು ತಿರುಗೇಟು ನೀಡಿದ್ದಾರೆ.

‘ಕರ್ನಾಟಕದಲ್ಲಿ ಬಿಜೆಪಿ ಸಂಘಟನೆ ಆಗೋದಕ್ಕೆ ಬಿಎಸ್ ಯಡಿಯೂರಪ್ಪರ ಪ್ರಾಮಾಣಿಕ ಪ್ರಯತ್ನ ಇದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಿಂದ ಕೆಳಗೆ ಇಳಿಸಿದರು. ಲಿಂಗಾಯತ ಸಮಾಜ ಬಿಎಸ್​ ವೈ ಇದೆ ಎಂದು ಪ್ರಚಾರ ಮಾಡಿದರು. ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ. ಅವರನ್ನು ಪಕ್ಷದಿಂದ ಹೊರಗೆ ಇಟ್ಟರು. ಅವರ ಮಗನಿಗೆ ಎಂಎಲ್​ ಸಿ ಟಿಕೆಟ್ ಕೂಡ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ