Breaking News
Home / ರಾಜಕೀಯ / ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

Spread the love

ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಪಿಯುಸಿ ಬೋರ್ಡ್ ಮಾರ್ಗಸೂಚಿ ಮತ್ತು ವೇಳಾಪಟ್ಟಿ ಪ್ರಕಟ ಮಾಡಿದೆ.

ಹಿಜಬ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವರ್ಷ ಸರ್ಕಾರ ಎಚ್ಚೆತ್ತುಕೊಂಡಿದೆ. ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಅಂತ ಮಾರ್ಗಸೂಚಿಯಲ್ಲೆ ತಿಳಿಸಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ