Breaking News

ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ

Spread the love

ಬೆಳಗಾವಿ – ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ಮೂಡಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಧಾಮಣೆ ಗ್ರಾಮದ ಜನರು ಕೆಲಸವಿಲ್ಲದೆ ತಮ್ಮ ಜೀವನ ಸಾಗಿಸಲಿಕ್ಕೆ ತೊಂದರೆಗಳನ್ನು ಅನುಭವಿಸುತ್ತಿದ್ದರು. ಈ ವಿಷಯ ಗಮನಕ್ಕೆ ಬಂದ ತಕ್ಷಣ ಗ್ರಾಮ ಪಂಚಾಯತಿ ಅಭಿವೃದ್ಧಿಯ ಅಧಿಕಾರಿ ಹಾಗೂ ನರೇಗಾ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ತ್ವರಿತಗತಿಯಲ್ಲಿ ಈ ಜನರಿಗೆ ಲೇಬರ್ ಕಾರ್ಡ್ ಗಳನ್ನು ಮಾಡಿಸಿ, ಕೆಲಸವನ್ನು ಕೊಡಿಸಿದರು. ಜೊತೆಗೆ ಅವರೆಲ್ಲರ ಆರೋಗ್ಯದ ದೃಷ್ಟಿಯಿಂದ ಮೆಡಿಕಲ್ ಫರ್ಸ್ಟ್ ಏಡ್ ಕಿಟ್ ಗಳನ್ನು ಸಹ ವ್ಯವಸ್ಥೆ ಮಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಹಿರೇಮಠ ಮತ್ತು ಸಿಬ್ಬಂದಿ ಮೂಲಕ ವಿತರಿಸಲು ವ್ಯವಸ್ಥೆ ಮಾಡಿದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ