ಬೆಂಗಳೂರು: ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಇಂದಿನಿಂದ ಮಳೆಯ ಆರ್ಭಟ ಜೋರಾಗಲಿದೆ.
ಇಂದಿನಿಂದ ಜೂನ್ 11ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೆಂಗಳೂರು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 9) 3 ದಿನಗಳವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್ 11ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ
Laxmi News 24×7