Breaking News

ಯಾರಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್ ಬಿಟ್ಟಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್

Spread the love

ಬೆಂಗಳೂರು,ಜೂ.10-ರಾಜ್ಯಸಭೆ ಚುನಾವಣೆಯಲ್ಲಿ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಯಾರಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್ ಬಿಟ್ಟಿದ್ದಾರೆ.

ಜೆಡಿಎಸ್ ಜೊತೆ ಮುನಿಸಿಕೊಂಡಿದ್ದ ಅವರು ಇತ್ತ ಸ್ವಪಕ್ಷದ ಅಭ್ಯರ್ಥಿಗೂ ಮತ ಹಾಕದೆ ಇನ್ನೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿಗೂ ಮತ ಹಾಕದೆ ಬ್ಯಾಲೆಟ್ ಪೇಪರ್‍ನಲ್ಲಿ ಯಾರಿಗೂ ಸೂಚಿಸದೆ ಖಾಲಿ ಬಿಟ್ಟಿದ್ದಾರೆ.

ನಿಯಮಗಳ ಪ್ರಕಾರ ಮತ ಚಲಾಯಿಸುವ ಶಾಸಕರು ಬ್ಯಾಲೆಟ್ ಪೇಪರ್‍ನಲ್ಲಿ ಯಾವುದಾದರೂ ಒಬ್ಬ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು. ಇಲ್ಲದಿದ್ದರೆ ಅದನ್ನು ಎಣಿಕೆ ವೇಳೆ ಪರಿಗಣಿಸಲಾಗುವುದಿಲ್ಲ.

ಕೋಲಾರದ ಶಾಸಕ ಶ್ರೀನಿವಾಸ್ ಗೌಡ ಕೂಡ ಕಾಂಗ್ರೆಸ್‍ಗೆ ಮತ ಚಲಾಯಿಸಿದ್ದು, ಮತ್ತೊಂದು ಕಡೆ ಎಸ್.ಆರ್.ಶ್ರೀನಿವಾಸ್ ಬ್ಯಾಲೆಟ್ ಪೇಪರ್‍ನಲ್ಲಿ ಖಾಲಿ ಬಿಟ್ಟಿದ್ದರಿಂದ ಜೆಡಿಎಸ್‍ಗೆ 2 ಮತ ಖೋತಾ ಆಗಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ