ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ.
ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ ಚುನಾವಣೆ ಮಾಡುತ್ತಿದ್ದೇವೆ.
ಎಲ್ಲಾ ಸಾಹುಕಾರ್ ಗಳು ಒಗ್ಗೂಡಿ ಕೆಲಸ ಮಾಡುತ್ತೇವೆ. ಗೋಕಾಕ, ಹುಕ್ಕೇರಿ, ಅಥಣಿ ಸಾಹುಕಾರ್ ಎಲ್ಲರೂ ಕೂಡಿ ಕೆಲಸ ಮಾಡುತೇವೆ. ಲಖನ್ ಜಾರಕಿಹೊಳಿ ಬೆಂಬಲ ಬಗ್ಗೆ ಸಾರ್ವಜನಿಕ ಚರ್ಚೆ ಬೇಡ. ಈ ಕುರಿತಂತೆ ಸಿಎಂ ಹಾಗೂ ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದರು..
Laxmi News 24×7