Breaking News

ಅರುಣ್ ಶಹಾಪುರ್, ಹನುಮಂತ ನಿರಾಣಿ ದೊಡ್ಡ ಲೀಡ್‍ನಲ್ಲಿ ಆಯ್ಕೆಯಾಗುವ ವಿಶ್ವಾಸವಿದೆ: ಬಸವರಾಜ್ ಬೊಮ್ಮಾಯಿ

Spread the love

ನಿನ್ನೆ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನ ಪಡೆದಿದ್ದೇವೆ. ಅದೇ ರೀತಿ ವಿಧಾನ ಪರಿಷತ್‍ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಥಮ ಬಾರಿ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನ ಪಡೆದಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪ್ರತಿನಿಧಿತ್ವ ಹೆಚ್ಚಾಗಿದೆ. ಅದೇ ರೀತಿ ವಿಧಾನ ಪರಿಷತ್‍ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ. ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಯಡಿಯೂರಪ್ಪ ಸೇರಿ ನಮ್ಮ ಹಿರಿಯ ನಾಯಕರು ಪ್ರಚಾರ ಮಾಡಿದ್ದಾರೆ. ಎಲ್ಲಾ ಸಂಘ ಸಂಸ್ಥೆಯವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅರುಣ್ ಶಹಾಪುರ್, ಹನುಮಂತ ನಿರಾಣಿ ದೊಡ್ಡ ಲೀಡ್‍ನಲ್ಲಿ ಆಯ್ಕೆಯಾಗುವ ವಿಶ್ವಾಸವಿದೆ ಎಂದರು.

ಬಿಜೆಪಿ ವಿರುದ್ಧ ಕೆಎಲ್‍ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ನನಗೆ ಮುಂಚೆನೇ ಹೇಳಿದ್ದರು, ಪೂರ್ವಭಾವಿಯಾಗಿ ಡಾಕ್ಟರೇಟ್ ಕೊಡುವ ಕಾರ್ಯಕ್ರಮ ಇತ್ತು. ಆರು ತಿಂಗಳು ಮೊದಲೇ ನಿಶ್ಚಯವಾಗಿತ್ತು ಎಂದು ನನಗೆ ಹೇಳಿಯೇ ಹೋಗಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ