ಅಕ್ಕಿ ಸಾಗಾಟ ಕೇಸ್ ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನಲೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಹರನಾಳ ಆದೇಶಿಸಿದ್ದಾರೆ.
ಇನ್ನು ಅಂದಾಜು 44,900 ರೂ.ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾಗಿದೆ.
ಅದಕ್ಕಾಗಿ ಮುಖ್ಯಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಹರನಾಳ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
Laxmi News 24×7