Breaking News

ಬೆಳಗಾವಿ ಸೇರಿ ರಾಜ್ಯದೆಲ್ಲೆಡೆ ಇಂದಿನಿಂದ ಭಾರಿ ಮಳೆಯ ಸಾಧ್ಯತೆ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಬಿರುಸಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಇನ್ನು ರಾಜ್ಯದ ಕರಾವಳಿಯಲ್ಲಿ ಮುಂಗಾರು ಮಳೆ ತುಸು ಬಿರುಸು ಪಡೆದಿದ್ದು, ಶನಿವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ. ಕರಾವಳಿಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ