Breaking News

ಪೊಲೀಸ್ ಇನ್ಸ್​​ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿ ಶಾಲೆಗೆ ಹೋಗದೇ, ಭಯಭೀತ

Spread the love

ಕಾರವಾರ: ಪೊಲೀಸ್ ಇನ್ಸ್​​ಪೆಕ್ಟರ್ ಧಮ್ಕಿಗೆ ಹೆದರಿದ 13 ವರ್ಷದ ಬಾಲಕಿಯೋರ್ವಳು ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದು ಕುಳಿತ ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ.

ಮುಂಡಗೋಡ ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್ ಸಿದ್ದಪ್ಪ ಸಿಮಾನಿ‌ ಬಾಲಕಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗ್ತಿದೆ.

ಜೂನ್​​ 5ರಂದು ಹೊಲದ ವಿಷಯವಾಗಿ ಸುಭಾನ್‌ಸಾಬ್‌ ನಬಿಸಾಬ್ ಹುಲಗುರ ಹಾಗೂ ಮುಂಡಗೋಡ ಠಾಣೆ ಇನ್ಸ್​​ಪೆಕ್ಟರ್ ಸಿದ್ದಪ್ಪ ಸಿಮಾನಿ‌ ನಡುವೆ ಜೋರಾದ ಮಾತುಕತೆ ನಡೆದಿದೆ. ಇದನ್ನು ದೂರದಿಂದಲೇ ನೋಡುತ್ತಿದ್ದ ಬಾಲಕಿ ಮೊಬೈಲ್ ತೆಗೆದು ವಿಡಿಯೋ ಮಾಡುತ್ತಿದ್ದಳು. ಆದರೆ ಇದನ್ನು ಕಂಡ ಇನ್ಸ್​​ಪೆಕ್ಟರ್, ಬಾಲಕಿಯಿಂದ ಮೊಬೈಲ್ ಕಸಿದುಕೊಂಡು ವಿಡಿಯೋ ಯಾಕೆ ಮಾಡುತ್ತಿದ್ದೀಯಾ? ಬಹಳ ಹುಷಾರಿದ್ದಿ, ನಿನ್ನ ಚರ್ಮ ಸುಲಿಯುತ್ತೇನೆ ಎಂದು ಧಮ್ಕಿ ಹಾಕಿ, ನೀವು ಎಲ್ಲರೂ ಪೊಲೀಸ್ ಠಾಣೆಗೆ ಬರಬೇಕೆಂದು ಹೇಳಿದ್ದರಂತೆ.

ಪೊಲೀಸ್ ಇನ್ಸ್​​ಪೆಕ್ಟರ್ ಧಮ್ಕಿ ಆರೋಪಇದರಿಂದ ಭಯಭೀತಳಾಗಿ ಇದುವರೆಗೂ ಚೇತರಿಸಿಕೊಳ್ಳದ ಬಾಲಕಿ ಮಾನಸಿಕವಾಗಿ ಅದೇ ಚಿತ್ರಣವನ್ನು ತಲೆಯಲ್ಲಿಟ್ಟುಕೊಂಡಿದ್ದಾಳೆ‌. ಅಲ್ಲದೆ, ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದು, ಇದರಿಂದ ಮನೆಯವರೂ ಆತಂಕಗೊಂಡಿದ್ದಾರೆ.‌ ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ಅಮಹಾನ್ ಅಬ್ದುಲ್‌ಸಾಬ್ ತಡಸ್​​ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ