ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಯ ಎಲ್ಲಾ ಹಂತದಲ್ಲಿಯೂ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತದೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೊರಲಿಂಗಯ್ಯ ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕುರಿತಂತೆ ಮಾತನಾಡಿದ ಡಾ. ಬೊರಲಿಂಗಯ್ಯನವರು, ಪರಿಷತ್ ಚುನಾವಣೆ ಹಿನ್ನೆಲೆ ಪೋಲಿಂಗ್ ಡೇದಿಂದಲೇ ಬಂದೋಬಸ್ತ್ ಕಾರ್ಯವನ್ನು ಮಾಡಲಾಗುತ್ತದೆ.
ಬೆಳಗಾವಿ ನಗರದಲ್ಲಿಯೂ ವಿಶೇಷ ಭದ್ರತೆ ಒದಗಿಸಲಾಗುತ್ತದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧೀನದಲ್ಲಿ ಬರುವ ಎಲ್ಲಾ ಕಡೆ ಬಂದೋಬಸ್ತ್ ಒಂದೆಡೆಯಾದರೆ, ಮಸ್ಟರಿಂಗ ಹಾಗೂ ಡಿ ಮಸ್ಟರಿಂಗ್ ಕಾರ್ಯ ಮುಗಿದ ನಂತರ, ಈ ಮತ ಎಣಿಕೆ ಕಾರ್ಯ ನಡೆಯುವುದರಿಂದ ಬೆಳಗಾವಿಯಲ್ಲಿ ವಿಶೇಷ ಕೌಂಟಿಂಗ್ ಭದ್ರತೆಯನ್ನು ಮಾಡಲಾಗುತ್ತದೆ. ಮತಪೆಟ್ಟಿಗೆ ಹಾಗೂ ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ಇರುವುದರಿಂದ ವಿಶೇಷ ಕಾಳಜಿಯನ್ನು ವಹಿಸಲಾಗುತ್ತದೆ ಎಂದರು.