Breaking News

ನಾಯಿ ಮರಿಗೆ ‘ಚಾರ್ಲಿ’ ಎಂದು ನಾಮಕರಣ ಮಾಡಿದ ಪೊಲೀಸ್ ಇಲಾಖೆ

Spread the love

ಮಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ ಚಲನಚಿತ್ರ ಶುಕ್ರವಾರ ಬಿಡುಗಡೆಗೊಂಡಿದ್ದು ಮನುಷ್ಯ ಮತ್ತು ಶ್ವಾನ ನಡುವಿನ ಭಾವನಾತ್ಮಕ ಸಂಬಂಧವನ್ನು ಕಥೆಯಲ್ಲಿ ಚಿತ್ರಿಸಲಾಗಿದೆ. ಇದರಿಂದ ಸ್ಫೂರ್ತಿಗೊಂಡು ಮಂಗಳೂರು ಪೊಲೀಸ್ ಶ್ವಾನದಳದ ನಾಯಿ ಮರಿಗೂ ಚಾರ್ಲಿ ಎಂಬ ಹೆಸರಿಡಲಾಗಿದೆ.

 

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಶ್ವಾನಕ್ಕೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಳೆದ ಮಾರ್ಚ್ ನಲ್ಲಿ ಹುಟ್ಟಿದ ಲ್ಯಾಬ್ರಡಾರ್ ರಿಟ್ರಿವರ್ ಶ್ವಾನವನ್ನು ಮಂಗಳೂರು ಪೊಲೀಸ್ ಇಲಾಖೆ ಖರೀದಿಸಿತ್ತು ,ಮುಂದಿನ ಸುಮಾರು 4ತಿಂಗಳ ಬಳಿಕ ಬೆಂಗಳೂರಿನ ಸೌತ್ ಸಿಆರ್ ನಲ್ಲಿ 6ತಿಂಗಳ ಕಾಲ ಈ ಶ್ವಾನಕ್ಕೆ ತರಬೇತಿ ನೀಡಲು ನಿರ್ಧರಿಸಲಾಗಿದೆ ,ಬಳಿಕ ಈ ಶ್ವಾನ ದಳ ಬಾಂಬ್ ನಿಷ್ಕ್ರಿಯ ಹಾಗೂ ಪತ್ತೆ ಮಾಡಲು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ರಕ್ಷಿತ್ ಶೆಟ್ಟಿ ಟ್ವೀಟ್ , ಮಂಗಳೂರು ಪೊಲೀಸರು ಶ್ವಾನದಳದ ನಾಯಿಗೆ ಚಾರ್ಲಿ ಎಂಬ ಹೆಸರಿಟ್ಟಿದ್ದು ರಕ್ಷಿತ್ ಶೆಟ್ಟಿ ಅವರು ರೀಟ್ವೀಟ್ ಮಾಡಿ ವಾವ್ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಟ್ವಿಟರ್ ವಾಲ್ ನಲ್ಲಿ ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ