ಬೆಳಗಾವಿ: ‘ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ತಾಲ್ಲೂಕಿನ ಮಚ್ಛೆ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನಿರಾಶ್ರಿತರ ಕೇಂದ್ರದ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದು ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಹಿರೇಮಠ ತಿಳಿಸಿದರು.
ನಿರಾಶ್ರಿತರ ಕೇಂದ್ರದ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ‘ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಸ್ಥಳೀಯ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.