Breaking News

ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಎಸ್ಕೇಪ್

Spread the love

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷರು ಓಡಿ ಹೋಗಿ ತಪ್ಪಿಸಿಕೊಂಡ ಘಟನೆ ನಡೆದಿದೆ.

 

ಇಡಿ ಕಚೇರಿ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬಿ.ವಿ. ಶ್ರೀನಿವಾಸ್ ಬಳಿ ಪ್ರತಿಭಟನೆ ಕೈಬಿಡುವಂತೆ ಸೂಚಿಸಿದ್ದು, ಇದಕ್ಕೆ ಶ್ರೀನಿವಾಸ್ ಒಪ್ಪಿಲ್ಲ. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ತಕ್ಷಣ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಶ್ರೀನಿವಾಸ್ ಸ್ಥಳದಿಂದ ಓಡಿ ಹೋಗಿ ಎಸ್ಕೇಪ್ ಆಗಿದ್ದಾರೆ.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ