Breaking News

ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

Spread the love

ಬೆಂಗಳೂರು: ಪ್ರತಿಭಟನೆ ಮಾಡುವುದು ಮೂಲಭೂತ ಹಕ್ಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ, ಪ್ರತಿಭಟನೆ ಮಾಡಿದವರು ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಅವರಿಗೆ ಅಧಿಕಾರದ ಮದ. ಅವರು ಸ್ವಾತಂತ್ರ್ಯ ಹೋರಾಟಗಾರರಾ? ಅವರು ಸ್ವಾತಂತ್ರ್ಯ ಹೋರಾಟದಲ್ಲೇ ಇರಲಿಲ್ಲ. ಸಂವಿಧಾನ ಗೊತ್ತಿಲ್ಲ, ಮೂಲಭೂತ ಹಕ್ಕುಗಳ ಬಗ್ಗೆ ಗೊತ್ತಿಲ್ಲ ಎಂದು ಹರಿಹಾಯ್ದರು. 

ದೆಹಲಿಯಲ್ಲಿ ಕೈ ನಾಯಕರ ಅರೆಸ್ಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ನಾಯಕರು ಎಐಸಿಸಿ ಕಚೇರಿಗೆ ಹೋಗಿದ್ದರು. ಅವರನ್ನು ಅರೆಸ್ಟ್ ಮಾಡಿ, ಮ್ಯಾನ್ ಹ್ಯಾಂಡ್ಲಿಂಗ್ ಮಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ ಆಫೀಸ್‍ಗೆ ಹೋಗುತ್ತಿದ್ದ ಡಿ.ಕೆ. ಸುರೇಶ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್ ಅವರನ್ನು ಅರೆಸ್ಟ್ ಮಾಡಿಸಿದ್ದಾರೆ. ಈಗ ಬಿಜೆಪಿಯವರು ತುರ್ತುಪರಿಸ್ಥಿತಿ ಬಗ್ಗೆ ಮಾತನಾಡುತ್ತಾರೆ. ಎಐಸಿಸಿ ಕಚೇರಿಗೆ ಹೋಗಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಇದೇನು ಪ್ರಜಾಪ್ರಭುತ್ವವೇ? ಇದೇನು ಸರ್ವಾಧಿಕಾರವೇ? ಪೊಲೀಸ್ ಅಧಿಕಾರವೇ? ಬಿಜೆಪಿ ಪ್ರಜಾಪ್ರಭುತ್ವ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

 


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ