ಬೆಳಗಾವಿಗೆ ಮಂಜೂರಾಗಿದ್ದ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಿರುವುದು ದುರ್ದೈವದ ಸಂಗತಿ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ತಿಳಿಸಿದ್ದಾರೆ.
ಬೆಳಗಾವಿಗೆ ಯಾವುದೇ ಒಂದು ಸರಕಾರಿ ಯೋಜನೆ ಪಡೆಯಬೇಕೆಂದರೆ ಹೋರಾಟದ ಮೂಲಕವೆ ಪಡೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಎಟಿ ಪೀಠ ಸ್ಥಾಪನೆ ಮಾಡುವಾಗ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಳಾಂತರವಾಗುವಾಲು ಹೋರಾಟ, ಬೆಳಗಾವಿಗೆ ಏಮ್ಸ್ ಬರಬೇಕೆಂದು ಹೋರಾಟ ನಡೆಸಲಾಗುತ್ತಿದೆ.
ಇದರ ನಡುವೆಯೇ ಬೆಳಗಾವಿಗೆ ಮಂಜೂರಾಗಿದ್ದ ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆ ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪ್ರಭಾವಿ ಸಚಿವ ಉಮೇಶ ಕತ್ತಿ ಅವರ ನಿರ್ಲಕ್ಷ್ಯ ದೋರಣೆಯೇ ಕಾರಣ ಎಂದು ಕಿಡಿಕಾರಿದ್ದಾರೆ.
Laxmi News 24×7