Breaking News

ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್

Spread the love

ಧರ್ಮಸ್ಥಳ, ಜೂ.15. ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೋರ್ವರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ.

ಇವರು ಧರ್ಮಸ್ಥಳದಿಂದ ಸ್ನಾನಘಟ್ಟದ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುರಿದು ಬಿದ್ದಿದ್ದ ಮರವನ್ನು ಗಮನಿಸದೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೆ ಇರುವುದರಿಂದ ಜೀವಹಾನಿಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ