Breaking News

ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!

Spread the love

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ.

ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ.

ಅದು ಕಳೆದ ಕೆಲವು ತಿಂಗಳ ಹಿಂದೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಹೋದರ ಚನ್ನರಾಜ್ ಹಟ್ಟಿಹೊಳಿ ನಿಲ್ಲಿಸಿ ಗೆಲ್ಲಿಸಿದ್ದು ಹಾಗೂ ಇದೀಗ ನಿನ್ನೆ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ದಿಗ್ವಿಜಯ ಸಾಧಿಸಿದ್ದು. ಈ ಎರಡೂ ಸಂಗತಿಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ಬಹು ದೊಡ್ಡ ಶಕ್ತಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳೆದು ನಿಂತಿದ್ದಾರೆ. ಇಂದು ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿದ ಚಪ್ರಕಾಶ ಹುಕ್ಕೇರಿ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ