ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ.
ಹೌದು ಜೂ.17ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಭಾಸ್ಕರ್‌ರಾವ್ ರಾಯಬಾಗ, ಕುಡಚಿ ಹಾಗೂ ಗೋಕಾಕ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಜೂ.18ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ನಂತರ ಖಾನಾಪುರ, ಕಿತ್ತೂರು, ಬೈಲಹೊಂಗಲನಲ್ಲಿ ಸಭೆ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Laxmi News 24×7