ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಸಹ ಜೈಲಿಗೆ ಹೋಗುತ್ತಾರೆ. ದುಬೈ ಮತ್ತು ಮಾರಿಸಸ್ ನಲ್ಲಿ ಆಸ್ತಿ ಮಾಡಿದ್ದಾರೆ. ಹೀಗಾಗಿ ವಿಜಯೇಂದ್ರ ಆಗಾಗ ದುಬೈ ಮತ್ತು ಮಾರಿಸಸ್ ಗೆ ಹೋಗುತ್ತಾರೆ ಎಂದು ಹೇಳಿದರು.
Laxmi News 24×7