Breaking News

ಎಸಿಬಿ ದಾಳಿ: ಉಡುಪಿಯ ಸಣ್ಣ ನೀರಾವರಿ ಅಧಿಕಾರಿ ಹರೀಶ್ ಮನೆಯಲ್ಲಿ ಚಿನ್ನದ ಖಜಾನೆ

Spread the love

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.

 

1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ, ಇನ್ನೋವಾ ಕಾರು, ಮಾರುತಿ ಆಲ್ಟೋ 800, 2 ದ್ವಿಚಕ್ರವಾಹನಗಳು ಪತ್ತೆಯಾಗಿವೆ. 4.30 ಲ.ರೂ.ನಗದು ಹಾಗೂ ಅಪಾರ ಪ್ರಮಾಣದ ದಾಖಲೆ ಪತ್ರಗಳು ಮನೆಯಲ್ಲಿ ದೊರೆತಿವೆ. ಇವಿಷ್ಟೇ ಅಲ್ಲದೆ ಹಾವಂಜೆ ಹಾಗೂ ಪೆರ್ಡೂರಿನಲ್ಲಿ ಪತ್ನಿಯ ಹೆಸರಿನಲ್ಲಿ 5 ಸರ್ವೆ ಸಂಖ್ಯೆೆಯಲ್ಲಿ 2 ನಿವೇಶನಗಳು ಪತ್ತೆಯಾಗಿವೆ. ಬ್ಯಾಂಕ್ ನಲ್ಲಿಯೂ ಎಫ್‌ಡಿ ಖಾತೆ ಹೊಂದಿದ್ದು, ಬ್ಯಾಂಕ್ ನಲ್ಲಿರುವ ನಗದುಗಳ ಬಗ್ಗೆಯೂ ಮಾಹಿತಿ ಸಂಗ್ರಹ ನಡೆಯುತ್ತಿದೆ. ಕೊರಂಗ್ರಪಾಡಿಯ ಮನೆಯಲ್ಲಿ ಎಸಿಬಿ ಕಾರ್ಯಾಚರಣೆ ಮುಂದುವರಿದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ