Breaking News

ರಾಯಚೂರು: ನೀರಿನಲ್ಲಿ ಮಿತಿಮೀರಿದ ರಾಡಿಯಿಂದ ವಾಂತಿಭೇದಿ?

Spread the love

ರಾಯಚೂರು: ನಗರದಲ್ಲಿ ಪೂರೈಕೆಯಾಗುವ ಕುಡಿಯುವ ನೀರಿನಲ್ಲಿ ‘ರಾಡಿ’ ಮತ್ತು ಆಮ್ಲದ ಪ್ರಮಾಣ (ಪಿಎಚ್‌) ಮಿತಿಮೀರಿದ ಪ್ರಮಾಣದಲ್ಲಿ ಇರುವುದು ಪತ್ತೆಯಾಗಿದೆ.

ಕಲಷಿತ ನೀರು ಕುಡಿದು ಜನರು ವಾಂತಿ-ಭೇದಿಯಿಂದ ಬಳಲುತ್ತಿರುವುದು ಮತ್ತು ಕೆಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೀರಿನ ಪರೀಕ್ಷೆ ಮಾಡಿಸಿದೆ.

 

ರಾಂಪುರ ಜಲ ಶುದ್ಧೀಕರಣ ಘಟಕದಿಂದ ಶುದ್ಧೀಕರಿಸಿದ ನೀರನ್ನು ಕಳೆದ ಮೇ 30ರಂದು ಪರೀಕ್ಷಿಸಿದಾಗ ರಾಡಿ ಪ್ರಮಾಣ 14 ಮತ್ತು ಪಿಎಚ್‌ ಪ್ರಮಾಣ 8.8ರಷ್ಟು ಪತ್ತೆ ಆಗಿದೆ. ನೀರಿನಲ್ಲಿ ರಾಡಿ ಪ್ರಮಾಣ 1 ಮತ್ತು ಪಿಎಚ್‌ ಪ್ರಮಾಣ 6.5 ರಿಂದ 8.5 ರವರೆಗೆ ಇರಬಹುದು. ಇಂಥ ನೀ ರು ಕುಡಿಯಲು ಯೋಗ್ಯ ಎಂಬುದನ್ನು ಭಾರತೀಯ ಮಾನಕ ಬ್ಯುರೊ (ಬಿಐಎಸ್‌) ತಿಳಿಸಿತ್ತು. ಆದರೆ, ಇದು ರಾಯಚೂರಿನಲ್ಲಿ ಪಾಲನೆ ಆಗುತ್ತಿಲ್ಲ.

ನಗರದಲ್ಲಿ ವಾಂತಿ ಭೇದಿ ಪ್ರಕರಣ ಹೆಚ್ಚಾದ ಬಳಿಕ ಮೇ 29ರಿಂದ ಜೂನ್‌ 3ರವರೆಗೆ 110 ನೀರಿನ ಮಾದರಿಗಳನ್ನು ಸಂಗ್ರಹಿಸಿ, ಬಳ್ಳಾರಿಯಲ್ಲಿರುವ ಆರೋಗ್ಯ ಇಲಾಖೆ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದೆ. ಅವುಗಳಲ್ಲಿ 24 ಮಾದರಿ ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಿದೆ.

ರಾಯಚೂರು ನಗರದಲ್ಲಿ ಆಶಾ ಕಾರ್ಯಕರ್ತೆಯರು 1,832 ಮನೆಗಳ ಸಮೀಕ್ಷೆ ಮಾಡಿದ್ದು, 95 ಮನೆಗಳಲ್ಲಿ ಜನರು ವಾಂತಿಭೇದಿ ಸಮಸ್ಯೆಯಿಂದ ಬಳಲುತ್ತಿರುವುದು ಕಂಡುಬಂದಿದೆ. 85 ಜನರನ್ನು ಚಿಕಿತ್ಸೆ ಪಡೆಯಲು ಶಿಫಾರಸು ಮಾಡಲಾಗಿತ್ತು.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ