Breaking News

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಸೆಕೆಂಡ್ ಟಾಪರ್.. ಮುಂದಿನ ಶಿಕ್ಷಣಕ್ಕಾಗಿ ಕೂಲಿ ಕೆಲಸಕ್ಕೆ ಗುಳೇ ಹೋಗಿರೋ ವಿದ್ಯಾರ್ಥಿ..

Spread the love

ಗದಗ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ನ ಶ್ರೀ ಅಣ್ಣದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ್ ಎಂಬಾತ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾನೆ. ಮೂಲತ: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಬಳಿಯ ಯಲಗಟ್ಟ ಗ್ರಾಮದ ನಿವಾಸಿಯಾಗಿರೋ ಶಿವರಾಜ್ ಕಷ್ಟಪಟ್ಟು ಓದಿ ಈ ಸಾಧನೆ ಮಾಡಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್, ನನ್ನ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು ನನ್ನ ವಿದ್ಯಾಭ್ಯಾಸ ನೋಡಿಕೊಂಡಿದ್ದಾರೆ. ನನ್ನ ಸಾಧನೆ, ಶ್ರೇಯಸ್ಸು ನನ್ನ ತಂದೆ-ತಾಯಿಗೆ ಸಲ್ಲಬೇಕು. ಜೊತೆಗೆ ಕಾಲೇಜಿನ ಶಿಕ್ಷಕರು ನನಗೆ ಬಹಳಷ್ಟು ಬೆಂಬಲ ನೀಡಿದ್ದಾರೆ. ಇವರೆಲ್ಲರ ಕಾರಣದಿಂದ ನನಗೆ ದ್ವಿತೀಯ ಸ್ಥಾನ ಲಭಿಸಿದೆ ಎಂದು ಹೇಳಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಶಿವರಾಜ್

ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ ಶೇ.96ರಷ್ಟು ಅಂಕ ಪಡೆದು ಶಿವರಾಜ್ ಸಾಧನೆ ಮಾಡಿದ್ದರು. ಇಂದು ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸದ್ಯ ವಿದ್ಯಾರ್ಥಿ ಶಿವರಾಜ್ ಮುಂದಿನ ಶಿಕ್ಷಣದ ವೆಚ್ಚಕ್ಕಾಗಿ ತುಮಕೂರಿನಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ