Breaking News

”ಕೆಜಿಎಫ್” ಬೆಡಗಿ ಶ್ರೀನಿಧಿ ಶೆಟ್ಟಿಗೆ ಕನ್ನಡದಲ್ಲಿ ಎಷ್ಟು ಅಂಕ ಗೊತ್ತಾ..? SSLC ಮಾರ್ಕ್ಸ್ ಕಾರ್ಡ್ ವೈರಲ್

Spread the love

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು ತೆಲುಗು ಹಾಗೂ ತಮಿಳು ಸಿನಿಮಾರಂಗದಲ್ಲೂ ತಮ್ಮ ಚಾಪೂ ಮೂಡಿಸುತ್ತಿದ್ದಾರೆ.

ಈ ಮಧ್ಯೆ ಶ್ರೀನಿಧಿ ಶೆಟ್ಟಿಯ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಶ್ರೀನಿಧಿ ಶೆಟ್ಟಿಯ ಅಂಕಪಟ್ಟಿ ನೋಡಿ ಕನ್ನಡಿಗರು ಶಹಭಾಷ್ ಅಂತಿದ್ದಾರೆ. ಮೂಲತಃ ಕನ್ನಡದ ಹುಡುಗಿಯಾಗಿರುವ ಶ್ರೀನಿಧಿ ಶೆಟ್ಟಿ ಹತ್ತನೇ ತರಗತಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಘಳಿಸಿದ್ದಾರೆ. ಕನ್ನಡ ವಿಭಾಗದಲ್ಲಿ 125 ಅಂಕಕ್ಕೆ 121 ಅಂಕ ಪಡೆದುಕೊಂಡಿದ್ದು ಕನ್ನಡಿಗರು ಮೆಚ್ಚುಗೆ ಸೂಚಿಸಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಶ್ರೀನಿಧಿ ಶೆಟ್ಟಿ ವಿಕ್ರಂ ನಟನೆಯ ಕೋಬ್ರಾ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಶ್ರೀನಿಧಿ ಮತ್ತಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಲಿ ಅಂತಿದ್ದಾರೆ ಅಭಿಮಾನಿಗಳು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ