ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ ಹೊಂದಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.
ಯೋಗ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ರುದ್ರಾಕ್ಷಿ ಮತ್ತು ಮಾಸ್ಕ್ ವಿತರಿಸಲಾಯಿತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
Laxmi News 24×7