ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮಾಜಿ ವೃತ್ತದ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 4 ಅಂತಸ್ತಿನ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಬೆಳಗಾವಿಯ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು, ಇಂಜನೀಯರ್, ಹಾಗೂ ಆಡಳಿತಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಕಾಮಗಾರಿ ನಡೆಯುತ್ತಿರುವ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಇನ್ನು ಆರು ತಿಂಗಳ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಆಸ್ಪತ್ರೆಯನ್ನು ನೀಡುವಂತೆ ಸೂಚನೆ ನೀಡಿದರು.
ಈ ವೇಳೆ ಆಸ್ಪತ್ರೆಯ ಪರಿಶೀಲನೆಯ ಬಳಿಕ ಮಾಧ್ಯಮಳೊಂದಿಗೆ ಮಾತನಾಡಿದ ಶಾಸಕ ಅನೀಲ್ ಬೆನಕೆ, ಈ ಆಸ್ಪತ್ರೆಯ ಕಟ್ಟಡವನ್ನು 2018ರಲ್ಲಿ ಪ್ರಾರಂಭ ಮಾಡಲಾಗಿದೆ. ಮಳೆ ಹಾಗೂ ಕೊರೊನಾ ಕಾರಣದಿಂದ ಕಟ್ಟಡ ನಿರ್ಮಾಣ ಸ್ವಲ್ಪ ವಿಳಂಬವಾಗಿದೆ.