Breaking News

ಬೆಳಗಾವಿ ಪುಟ್ಟ ಮಗಳು ಕೃಷ್ಣವೇಣಿಯ ಸಂಪೂರ್ಣ ಚಿಕಿತ್ಸೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯವಸ್ಥೆ

Spread the love

ಬೆಂಗಳೂರು: ದೃಷ್ಟಿ ದೋಷ, ಮಿದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬೆಳಗಾವಿ ಜಿಲ್ಲೆಯ ಕೇಳಿಗ್ರಾಮದ ಶಂಕ್ರಮ್ಮ ಎಂಬುವರ ಪುಟ್ಟ ಮಗಳು ಕೃಷ್ಣವೇಣಿಯ ಸಂಪೂರ್ಣ ಚಿಕಿತ್ಸೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯವಸ್ಥೆ ಮಾಡಿದ್ದಾರೆ.

 

ಮುಖ್ಯಮಂತ್ರಿಯವರು ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ಬೆಂಗಳೂರಿನ ತಮ್ಮ ನಿವಾಸಕ್ಕೆ ಹಿಂದಿರುಗಿದಾಗ ಹಸುಗೂಸು ಎತ್ತಿಕೊಂಡ ಶಂಕ್ರಮ್ಮ ಗಮನ ಸೆಳೆದರು. ಆಕೆಯ ಬಳಿ ಸಮಸ್ಯೆಯನ್ನು ವಿಚಾರಿಸಿದಾಗ, ಮಗುವಿನ ಕಾಯಿಲೆ ಬಗ್ಗೆ ವಿವರಿಸಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗಲಿದ್ದು, ನೆರವು ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ತಕ್ಷಣವೇ ಸ್ಪಂದಿಸಿದ ಬೊಮ್ಮಾಯಿ, ಕೃಷ್ಣವೇಣಿಯ ಚಿಕಿತ್ಸೆಗೆ ನೆರವು ನೀಡುವ ಭರವಸೆ ನೀಡಿದ್ದು ಮಾತ್ರವಲ್ಲದೆ, ಎರಡು ತಾಸಿನ ಒಳಗೆ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡ ಎಸ್‌ಡಿಎಂ ಆಸ್ಪತ್ರೆಗೆ ಪತ್ರ ಬರೆದು, ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದರು.

ಮಗುವಿನ ಚಿಕಿತ್ಸೆ ಸಂಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ಬಿಲ್‌ಗಳನ್ನು ಸಲ್ಲಿಸುವಂತೆಯೂ ಪತ್ರದಲ್ಲಿ ಎಸ್‌ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ. ಮುಖ್ಯಮಂತ್ರಿಯವರು ತ್ವರಿತಗತಿ ಸ್ಪಂದಿಸಿದ ಬಗ್ಗೆ ಮಗುವಿನ ತಾಯಿ ಹರ್ಷ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ