Breaking News

ರಾಜ್ಯದ ‘ಸರ್ಕಾರಿ ಜಮೀನು’ಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದ ‘ರೈತ’ರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

 

ಈ ಬಗ್ಗೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗೆ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 30-05-2022 ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿತ್ತು ಎಂದು ತಿಳಿಸಿದ್ದಾರೆ.

 

ಇದೀಗ ದಿನಾಂಕ 30-05-2022ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದ್ದಂತ ಕೊನೆಯ ದಿನಾಂಕವನ್ನು, ವಿಸ್ತರಿಸಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸೋದಕ್ಕಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 30-05-2022ರಿಂದ ಒಂದು ವರ್ಷದವರೆಗೆ ಅವಕಾಶ ನೀಡಿದೆ. ಈ ಮೂಲಕ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆಇದೀಗ ದಿನಾಂಕ 30-05-2022ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದ್ದಂತ ಕೊನೆಯ ದಿನಾಂಕವನ್ನು, ವಿಸ್ತರಿಸಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸೋದಕ್ಕಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 30-05-2022ರಿಂದ ಒಂದು ವರ್ಷದವರೆಗೆ ಅವಕಾಶ ನೀಡಿದೆ. ಈ ಮೂಲಕ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.


Spread the love

About Laxminews 24x7

Check Also

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ‌. ವಿಠ್ಠಲ ಕರಾಡೆ(29) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ