ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಗರಬಸ್ತಿಕೇರಿ ಎಂಬಲ್ಲಿ ಅತಿಹೆಚ್ಚು 104 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ, ಕೆಲವು ಕಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ.
ಮಲೆನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಮತ್ತು ಇನ್ನುಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಹಲವು ಕಡೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ
Laxmi News 24×7