Breaking News

ವ್ಯಕ್ತಿಯೊಬ್ಬರ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.

Spread the love

ಬೆಳಗಾವಿ: ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಬೆಳಗಾವಿ ಕೆಎಲ್ಇಎಸ್ ವೈದ್ಯರು ಹೊರತೆಗೆದಿದ್ದಾರೆ. ಬೆಳಗಾವಿಯ ಸ್ಥಳೀಯ ನಿವಾಸಿಯಾಗಿರುವ 45 ವರ್ಷದ ವ್ಯಕ್ತಿ ನಿತ್ಯ ಪೂಜೆ ಮಾಡುತ್ತಿದ್ದರು. ಪೂಜೆ ಬಳಿಕ ತೀರ್ಥ ಸೇವಿಸುವಾಗ ಗಮನಿಸದೇ ಲೋಹದ ಕೃಷ್ಣನ ಮೂರ್ತಿಯನ್ನು ನುಂಗಿದ್ದರು.

ಇದರಿಂದ ಅವರಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದರು. ಆಗ ವೈದ್ಯರು ಎಕ್ಸರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್​ನಲ್ಲಿ ಕೃಷ್ಣನ ವಿಗ್ರಹ ಗಂಟಲಿನಲ್ಲೇ ಇರುವುದು ಕಂಡುಬಂದಿದೆ. ಇದನ್ನರಿತ ವ್ಯಕ್ತಿ ಹೆಚ್ಚಿನ ಚಿಕಿತ್ಸೆ ಪಡೆಯಲು ಬೆಳಗಾವಿಯ ಕೆಎಲ್ಇಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೃಷ್ಣನ ಮೂರ್ತಿಯ ಎಡಗಾಲು ವ್ಯಕ್ತಿಯ ಆಹಾರ ನಾಳದಲ್ಲಿ ಸಿಲುಕಿದೆ ಎಂಬುದನ್ನು ವೈದ್ಯರು ಎಂಡೋಸ್ಕೋಪ್ ಮುಖಾಂತರ ದೃಢಪಡಿಸಿಕೊಂಡಿದ್ದಾರೆ. ಬಳಿಕ ಇಎನ್​ಟಿ ವಿಭಾಗದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ವಿಗ್ರಹವನ್ನು ಹೊರತೆಗೆದಿದ್ದಾರೆ. ಇಎನ್​ಟಿ ವಿಭಾಗದ ವೈದ್ಯರಾದ ಡಾ. ಪ್ರೀತಿ ಹಜಾರೆ, ಡಾ. ವಿನಿತಾ ಮೆಡಗುಡ್ಡಮಠ, ಅರವಳಿಕೆ ವೈದ್ಯ ಡಾ. ಚೈತನ್ಯ ಕಾಮತ್ ಸೇರಿದಂತೆ ಇತರ ಶುಶ್ರೂಷೆಯರ ಸಹಾಯದಿಂದ ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ.


Spread the love

About Laxminews 24x7

Check Also

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

Spread the loveವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ