Breaking News

ಸಚಿವ ಉಮೇಶ್ ಕತ್ತಿ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ

Spread the love

ಮೈಸೂರು: ಸಚಿವ ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ ಎಂದು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ ಅಂದ್ರೆ ಅದಕ್ಕೆ ಹೊಣೆ ಯಾರಪ್ಪ..?, ಅವತ್ತಿನಿಂದ ಅಲ್ಲಿ ಅಧಿಕಾರದಲ್ಲಿ ಇರುವವರು ನೀವೇ ತಾನೆ. ಏನು ಆಗಿದೆ, ಏನೂ ಆಗಿಲ್ಲ ಎಂಬ ಪಟ್ಟಿ ನಿನ್ನ ಬಳಿಯೇ ಇರುತ್ತೆ ನೋಡಿಕೋ. ಲಕ್ಷಾಂತರ ಜನರ ಹೋರಾಟದ ಫಲವಾಗಿ ಅಖಂಡ ಕರ್ನಾಟಕ ಸೃಷ್ಠಿಯಾಗಿದೆ. ಇದನ್ನು ಪದೇ ಪದೇ ಒಡೆಯುವ ಮಾತನಾಡಬೇಡಿ. ಚುನಾವಣೆ ಹತ್ತಿರ ಬಂದಾಗಲೆಲ್ಲಾ ಇಂತಹ ಬೇಜವಾಬ್ದಾರಿ ಕೂಗು ಶುರು ಮಾಡುತ್ತಾರೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ