Breaking News

ಸಣ್ಣ ರಾಜ್ಯಗಳು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿವೆ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಸಣ್ಣ ರಾಜ್ಯಗಳು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆ ಬಗ್ಗೆ ಸಚಿವ ಉಮೇಶ ಕತ್ತಿ ನೀಡಿದ ಹೇಳಿಕೆಗೆ, ಇಲ್ಲಿ ಸುದ್ದಿಗಾರರಿಗೆ ‍ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಯಾವುದೇ ರಾಜ್ಯ 3 ಕೋಟಿಗಿಂತ ಅಧಿಕ ಜನಸಂಖ್ಯೆ ಹೊಂದಿದ್ದರೆ ಮತ್ತೊಂದು ರಾಜ್ಯ ರಚಿಸಲು ವಿಶೇಷ ಮಸೂದೆ ಹೊರತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದು ಜಾರಿಯಾದರೆ ಎರಡು ರಾಜ್ಯಗಳಾಗುವುದು ಸಹಜ’ ಎಂದರು.

‘ಹೋರಾಟ ಮಾಡಿ ಅಲ್ಲಿನವರು ತೆಲಂಗಾಣ ರಾಜ್ಯ ರಚಿಸಿಕೊಂಡರು. ಆದರೆ, ಇದು ಹೋರಾಟವಲ್ಲ. ಪ್ರತ್ಯೇಕ ರಾಜ್ಯ ರಚನೆಗೆ ಬಿಜೆಪಿಯವರೇ ಮಸೂದೆ ಜಾರಿಗೊಳಿಸುತ್ತಿದ್ದಾರೆ. ಹಾಗಾಗಿ ಇಲ್ಲಿ ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಬರುವುದಿಲ್ಲ. ಆ ಮಸೂದೆ ಜಾರಿಗೆ ಬರುವಾಗ ಚರ್ಚಿಸೋಣ’ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ