Breaking News

ನಾಳೆಯಿಂದ `SSLC’ ಪೂರಕ ಪರೀಕ್ಷೆ

Spread the love

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ . ಈ ನಡುವೆಯೂ ದಿನಾಂಕ 27-06-2022 ರಿಂದ 04-07-2022 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ( SSLC Supplementary Exam ) ನಿಗದಿ ಪಡಿಸಲಾಗಿದೆ . ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ .

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಇದೇ ಜೂನ್ 27, 2022ರಿಂದ ದಿನಾಂಕ 04-07-2022ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ.

SSLC ಪೂರಕ ಪರೀಕ್ಷೆಯ ವೇಳಾಪಟ್ಟಿ:

ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ

ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)

ಜೂನ್ 30-ಸಮಾಜವಿಜ್ಞಾನ

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ-4 ಗಣಿತ, ಸಮಾಜಶಾಸ್ತ್ರ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ದಿನಾಂಕ 14-03-2022ರಂದು ಹೊರಡಿಸಲಾಗಿರುವಂತ ಎಸ್‌ಓಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಸಿಇಓಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆದೇಶಿಸಿದ್ದಾರೆ.

ಹೀಗಿದೆ ಎಸ್ ಎಸ್ ಎಲ್ ಸಿ ಪೂರಕ ಕೋವಿಡ್ ನಿಯಂತ್ರಣ ಕ್ರಮಗಳು

  • ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು
  • ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು
  • ದೈಹಿಕ ಅಂತರ ಕಾಪಾಡುವುದು
  • ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡುವುದು.
  • ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು
  • ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು
  • ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು
  • ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು.

Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ