Breaking News

ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿಯ ಕೊಲ್ಲಾಪುರ ಸರ್ಕಲ್ ಬಳಿ ನಡೆಯಿತು.

Spread the love

ಬೆಳಗಾವಿ: ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ನಡೆದಿದೆ. ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ರೇಣುಕಾ ಭಾತಕಾಂಡೆ (30)‌ ಮೃತರು.

ಇವರು ಚನ್ನಮ್ಮ ವೃತ್ತದ ಕಡೆ ತಮ್ಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಕಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಈಗ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ