Breaking News

ಬೆಳಗಾವಿ ನೂತನ S.P. ಆಗಿ ನೇಮಿಸಿ ಸಂಜೀವ್ ಪಾಟೀಲ ನೇಮಕ,ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ

Spread the love

ಧಾರವಾಡ : 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಪಿ.ಕೃಷ್ಣಕಾಂತ್‌ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, 2015ನೇ ಬ್ಯಾಚಿನ ಐಪಿಎಸ್ ಅಧಿಕಾರಿ ಲೋಕೇಶ್ ಜಗಲಸರ್ ಅವರನ್ನು ನೇಮಕ ಮಾಡಲಾಗಿದೆ.

ಸಂಜೀವ್ ಪಾಟೀಲ ಬೆಳಗಾವಿ ನೂತನ ಎಸ್ಪಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವರ್ಗ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2012ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜೀವ್ ಪಾಟೀಲ ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಕಳೆದ ಮೂರು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿ ಆಗಿ ಲಕ್ಷ್ಮಣ ನಿಂಬರಗಿ ಸೇವೆ ಸಲ್ಲಿಸುತ್ತಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ