Breaking News

ಕನಕದಾಸರ ಚರಿತ್ರೆ ಹಿಂದೆ ಇದ್ದಂತೆಯೇ ಪ್ರಕಟಿಸಬೇಕು: C.M. ಬೊಮ್ಮಾಯಿ

Spread the love

ಬೆಂಗಳೂರು: ‘ಪಠ್ಯಪುಸ್ತಕದಲ್ಲಿ ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಈ ಹಿಂದೆ ಇದ್ದಂತೆಯೇ ಮತ್ತೆ ಪ್ರಕಟಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಖಿತ ಸೂಚನೆ ನೀಡಿದ್ದಾರೆ.

ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಕನಕದಾಸರ ಜೀವನ ಚರಿತ್ರೆ ಮತ್ತು ವಿವರಗಳನ್ನು ಕಡೆಗಣಿಸಿದೆ ಎಂದು ಸ್ವಾಮೀಜಿ ಹೇಳಿದರು.

ಒಂಬತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ ಜೀವನ ವಿವರಗಳನ್ನೊಳಗೊಂಡ ಪಠ್ಯ ಭಾಗವನ್ನು ಒಂದೇ ಸಾಲಿಗೆ ತಂದು ಕಡಿತಗೊಳಿಸುವ ಮೂಲಕ ಕನಕದಾಸರ ಆದರ್ಶ ಮತ್ತು ದಾರ್ಶನಿಕ ಸತ್ಯಗಳನ್ನು ಮರೆಮಾಚುವ ದೊಡ್ಡ ಹುನ್ನಾರ ನಡೆದಿದೆ ಎಂದು ಅವರು ಆಕ್ಷೇಪಿಸಿದರು.

ಇದು ಹಿಂದುಳಿದ ಸಮುದಾಯಗಳನ್ನು ಒಳಗೊಂಡಂತೆ ಈ ನೆಲದ ನಾಡು- ನುಡಿಗೆ ಮಾಡಿದ ದ್ರೋಹವಾಗಿದೆ. ಚಾರಿತ್ರಿಕ ಮತ್ತು ಸಾಂಸ್ಕೃತಿಕ ದ್ರೋಹವಾಗಿದೆ. ತಾವು ಮಧ್ಯ ಪ್ರವೇಶಿಸಿ ಕನಕದಾಸರ ಜೀವನ ವಿವರಗಳನ್ನು ಹಿಂದಿನಂತೇ ಅಳವಡಿಸಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ