Breaking News

ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್

Spread the love

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.

ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತೆ ನರ್ಸ್ ಸಮವಸ್ತ್ರ ಧರಿಸುವ ಮೂಲಕ ವೈದ್ಯಕೀಯ ಸಿಬ್ಬಂದಿಗಳಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರಿದ್ದಾರೆ. ನರ್ಸ್ ಉಡುಪು ತೊಟ್ಟು ಬಿಎಂಸಿಯ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಮತ್ತೆ ಸೇರಿಕೊಂಡಿದ್ದಾರೆ.

ಮುಂಬೈನಲ್ಲಿ 1036 ಕಂಟೈನ್‍ಮೆಂಟ್ ಝೋನ್‍ಗಳ ಪೈಕಿ 231 ಝೋನ್‍ಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕಳೆದ 14 ದಿನಗಳಿಂದ ಒಂದೇ ಒಂದು ಕೊರೊನಾ ಪಾಸಿಟಿವ್ ದಾಖಲಾಗದ ಕಾರಣ 231 ವಲಯಗಳನ್ನು ಕಂಟೈನ್‍ಮೆಂಟ್ ಝೋನ್ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮೇಯರ್ ಮಾಹಿತಿ ನೀಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮೇಯರ್, “ನಾವು ಕೂಡ ಮನೆಯಲ್ಲಿ ಕೂತು ಕೆಲಸ ಮಾಡಬಹುದು. ಆದರೆ ನಾವು ನೀಮಗಾಗಿ ಮನೆಯಿಂದ ಹೊರ ಬಂದು ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ನೀವು ಮನೆಯಲ್ಲಿರಿ, ಸುರಕ್ಷಿತವಾಗಿ ಇರಿ. ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೆ ಬೆಂಬಲ ನೀಡಲು ಇಚ್ಚಿಸುತ್ತೇನೆ” ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,068 ಏರಿಕೆಯಾಗಿದ್ದು, ಈ ಪೈಕಿ 1,076 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 342 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

View image on Twitter


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ