Breaking News

ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ

Spread the love

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ನೇರ ನೇಮಕಾತಿ ಸೇರಿದಂತೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಕಲ್ಯಾಣ ಸೌಲಭ್ಯಗಳನ್ನ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ತ್ಯಾಜ್ಯ ಸಮಸ್ಯೆ ಉಲ್ಬಣಿಸಲಿದೆ.

ಪೌರ ಕಾರ್ಮಿಕರ ಬೇಡಿಕೆ ಏನು?: ಕೆಲಸದ ಖಾಯಮಾತಿ ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 ರೂ. ಅಲ್ಪ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಹೀಗಾಗಿ, ನೇರ ನೇಮಕಾತಿ ಮಾಡಬೇಕೆಂಬುದು ಪೌರಕಾರ್ಮಿಕ ಒಕ್ಕೂಟದ ಪ್ರಮುಖ ಬೇಡಿಕೆಯಾಗಿದೆ.

ಮಾರ್ಚ್ 2017ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಸಂಪುಟ ಸಭೆಯಲ್ಲಿ ಪೌರಕಾರ್ಮಿರನ್ನು ಖಾಯಮಾತಿಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರವೇ ಪ್ರಸ್ತಾವನೆಯನ್ನು ಅನುಷ್ಠಾನಗೊಳಿಸಲು ವಿಫಲವಾಯಿತು. ಬಳಿಕ ಬಂದ ಸರ್ಕಾರಗಳು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಗೋಜಿಗೆ ಹೋಗಿಲ್ಲ.


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ