Breaking News

ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್‌ʼ ಸಂಗತಿ ಹೇಳಿದ ನಟಿ ಚಿತಾಳೆ

Spread the love

ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ ಹೇಳಿದ್ದೇನೆ ಮತ್ತು ನನಗೆ ಎದುರಾಗಿರುವ ಸವಾಲನ್ನು ಎದುರಿಸುತ್ತೇನೆ ಎಂದು ಚಿತಾಳೆ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಶರದ್ ಪವಾರ್ ವಿರುದ್ಧ ಚಿಟಾಳೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಕ್ಕೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ನಂತರ ಥಾಣೆ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ನನಗೆ ಪೊಲೀಸರು ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲ, ನನ್ನ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ. ನನ್ನ ಮುಖಕ್ಕೆ ಮಸಿಯನ್ನೂ ಹಾಕಿದ್ದಾರೆ ಎಂದು ಚಿತಾಳೆ ಆರೋಪಿಸಿದ್ದಾರೆ.

ನನ್ನನ್ನು ಬಿಡುಗಡೆ ಮಾಡಿದ್ದಕ್ಕೆ ನಾನು ಜೈಲಿನಿಂದ ಮಂದಸ್ಮಿತಳಾಗಿಯೇ ಬಂದಿದ್ದೇನೆ. ಆದರೆ. ನಾನು ಜಾಮೀನಿನ ಮೇಲೆ ಹೊರ ಬಂದಿದ್ದೇನೆ. ಹೋರಾಟ ಮುಂದುವರಿಯುತ್ತದೆ ಎಂದು ಹೇಳಿರುವ ಅವರು, ನನ್ನ ವಿರುದ್ಧ ದಾಖಲಾಗಿರುವ 22 ಎಫ್‌ಐಆರ್ ಗಳ ಪೈಕಿ ಕೇವಲ ಒಂದಕ್ಕೆ ಮಾತ್ರ ಜಾಮೀನು ಸಿಕ್ಕಿದೆ. ಇನ್ನೂ ಹೋರಾಟ ಸಾಕಷ್ಟಿದೆ ಎಂದು ಹೇಳಿಕೊಂಡಿದ್ದಾರೆ.

ಪವಾರ್ ಬಗ್ಗೆ ನಾನು ಹಾಕಿದ ಪೋಸ್ಟ್ ನಲ್ಲಿ ಯಾವುದೇ ಅವಹೇಳನಾಕಾರಿ ಅಂಶಗಳಿಲ್ಲ. ಆದರೆ, ಜನರು ಅದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ