Breaking News

ಜಮೀನು ವಿವಾದ; ತಮ್ಮನ ಕಾಟಕ್ಕೆ ಬೇಸತ್ತು ಅಣ್ಣ ಆತ್ಮಹತ್ಯೆ

Spread the love

ಬೆಳಗಾವಿ; ಜಮೀನು ವಿಚಾರದಲ್ಲಿ ತಮ್ಮನ ಕಿರುಕುಳ ತಾಳಲಾರದೇ ಅಣ್ಣನೋರ್ವ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವರು.

ಮೃತ ಶ್ರೀಕಾಂತ್ ಮತ್ತು ಅವರ ಸಹೋದರ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತೆನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ ಅವರ ತಂದೆ ಅಪ್ಪಾಜಿಗೆ ತಿಳಿಸದೇ ನಾಲ್ಕು ವರ್ಷದ ಹಿಂದೆ ಸುಧೀರ್ ಗಡ್ಡೆ ಎಂಬ ಬಿಲ್ಡರ್‌ಗೆ 28 ಲಕ್ಷ ರೂಪಾಯಿಗೆ 1 ಎಕರೆ 6 ಗುಂಟೆ ಜಮೀನು ಮಾರಾಟ ಮಾಡಿದ್ದನಂತೆ. ಇದು ಗೊತ್ತಾದ ಮೇಲೆ ಮಧುಕರ್ ಜಾಧವ್ ಮೇಲೆ ಶ್ರೀಕಾಂತ್ ಕೇಸ್ ಹಾಕಿದ್ದರು. ನಂತರ ರಾಜಿ ಪಂಚಾಯತಿ ಮಾಡಿ ಸಮಾಧಾನ ಪಡಿಸಲು ಮಧುಕರ್ ಮುಂದಾಗಿದ್ದನಂತೆ. ನಂತರ ಸಬ್ ರಿಜಿಸ್ಟಾರ್‌ ಕಡೆ ಹೋಗಿ ಸಹಿ ಮಾಡಿಸಿ ಶ್ರೀಕಾಂತ್‍ಗೆ 6 ಲಕ್ಷ ರೂಪಾಯಿ ಕೊಟ್ಟು ಮಧುಕರ್ ಕೈ ತೊಳೆದುಕೊಂಡು ಬಿಟ್ಟಿದ್ದನೆಂದು ತಿಳಿದುಬಂದಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ