ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ.
ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ ತನಿಖೆ ತೀವ್ರಗೊಂಡ ಬೆನ್ನಲ್ಲೇ ನಾಪತ್ತೆಯಾಗಿದ್ದ.
ತಾಂತ್ರಿಕ ಮಾಹಿತಿ ಆಧರಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಮೀಪ ಆರೋಪಿ ಜಾಗೃತ್ ನನ್ನು ಸಿಐಡಿ ಬಂಧಿಸಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ.
Laxmi News 24×7