ಕುಂದಾನಗರಿ ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳ ಮೇಲೆಯೇ ತಂದೆಯೊಬ್ಬ ೫ ವರ್ಷದ ಮಗಳ ಕೆನ್ನೆ ಹಾಗೂ ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ತಂದೆ ಕಾಕಾತಿ ಪಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್‌ಆಗಿ ಮಗುವಿನ ತಾಯಿ ಸೇವೆ ಸಲ್ಲಿಸುತ್ತಿದ್ದಾರೆ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಕುಡಿದ ಅಮಲಿನಲ್ಲಿ ತಂದೆ ಈ ವಿಕೃತಿ ಮೆರೆದಿದ್ದಾನೆ. ಸದ್ಯ ಆರೋಪಿಯನ್ನು ಕಾಕತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.