Breaking News

ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ವದಂತಿ- ಗ್ರಾಮಸ್ಥರ ಆತಂಕ-

Spread the love

ಹಾವೇರಿ : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸರಬರಾಜು ಮಾಡುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿಯ ಅಕ್ಕಿ ಪೂರೈಕೆಯಾಗುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಈ ರೀತಿಯ ಪಡಿತರ ಅಕ್ಕಿ ಪೂರೈಕೆಯಾಗುತ್ತಿದೆ ಎಂದು ಜನರು ಹೇಳಿದ್ದಾರೆ. ಪಡಿತರ ಅಕ್ಕಿಯಲ್ಲಿ ಈ ಅಕ್ಕಿಗಳು ಪೂರೈಕೆಯಾಗುತ್ತಿದ್ದು, ಇದು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದಾಗಿ ಆರೋಪಿಸಿದ್ದಾರೆ.

ಪೂರೈಕೆಯಾಗಿರುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೀತಿಯ ಅಕ್ಕಿಯನ್ನು ಜನರು ತಾವೇ ಬೇರ್ಪಡಿಸಿ ಪರೀಕ್ಷೆ ನಡೆಸಿ ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಅನ್ನ ಸೇವನೆಯಿಂದ ಗ್ಯಾಸ್ ಟ್ರಬಲ್ ಸೇರಿದಂತೆ ವಿವಿಧ ಸಮಸ್ಯೆಗಳಾಗುತ್ತವೆ ಎಂಬ ವದಂತಿಗಳು ಹರಡಿವೆ. ಇನ್ನೂ ಕೆಲವರು ಪಡಿತರ ಅಕ್ಕಿಯನ್ನು ಬಳಸದೇ ಹಾಗೇ ಇಟ್ಟಿದ್ದಾರಂತೆ.

ಆದರೆ ಈ ರೀತಿ ಪಡಿತರ ಅಕ್ಕಿಯಲ್ಲಿ ಮಿಶ್ರಣವಾಗಿರುವ ಅಕ್ಕಿ ಪ್ಲಾಸ್ಟಿಕ್ ಅಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಕೊರೊನಾ ಬಂದಿತ್ತು. ಅಲ್ಲದೆ ಸಾರ್ವಜನಿಕರಿಗೆ ಪೌಷ್ಟಿಕಾಂಶದ ಕೊರತೆ ಇರುವ ಕಾರಣ ಇಲಾಖೆ ಈ ರೀತಿಯ ಅಕ್ಕಿಯನ್ನು ಪೂರೈಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿನೋದಕುಮಾರ್ ಹೆಗ್ಗಳಿಗಿ ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ