ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಚರಂಡಿ ನೀರು ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆ ಮೇಲೆ ಹರಿದಿದೆ.
ಹೌದು ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಳೆರಾಯ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.
ಇದರಿಂದ ಬೆಳಗಾವಿಯ ಹಳೆ ಪಿಬಿ ರೋಡ್‍ನಲ್ಲಿ ಚರಂಡಿಯಲ್ಲಿ ಮಳೆ ನೀರು ಹೆಚ್ಚಾಗಿ ಓವರ್ ಫ್ಲೋ ಆಗಿ ಡ್ರೈನೇಜ್ ನೀರು ರಸ್ತೆಯ ಮೇಲೆ ಹರಿಯುತ್ತಿದೆ.
ಹಂಗಿಕರ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಚರಂಡಿಯಿಂದ ರಸ್ತೆ ಮೇಲೆ ಹರಿದಿದೆ. ಇದರಿಂದ ಜನರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು